ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಹಾಗೂ ಪ್ರತಿಭಾ ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಿನ್ಸಿಪಾಲ್ ರೆ.ಫಾ.ವರ್ಗೀಸ್ ಕೈಪನಡ್ಕ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಸಮಾಜದ ಆಸ್ತಿ, ಈ ಆಸ್ತಿಯನ್ನು ಪರಿಪಕ್ವವಾದ ರೀತಿಯಲ್ಲಿ ನಾವು ಸಮಾಜಕ್ಕೆ ಹಸ್ತಾಂತರಿಸುತಿದ್ದೇವೆ ಎಂದು ಹೇಳಿದರು.
ಸಂಸ್ಥೆಯ ಹಳೆ ವಿದ್ಯಾರ್ಥಿನಿ ಅನುಷಾ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತಾನೆ ಅವನನ್ನು ಬೆಳೆಸುವುದು ಗುರು ಹಿರಿಯರ ಹಾಗೂ ಶಿಕ್ಷಣ ಸಂಸ್ಥೆಗಳಿಂದ. ಬೆಥನಿ ಸಂಸ್ಥೆಯಿಂದ ತಾನು ಬಹಳಷ್ಟು ಬೆಳೆಯಲು ಸಾಧ್ಯವಾಯಿತು ಹಾಗೂ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.
ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಸಣ್ಣಿ.ಕೆ.ಎಸ್ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ದೃಢ ನಿರ್ಧಾರ, ಕಠಿಣ ಪರಿಶ್ರಮ ಎಲ್ಲವನ್ನು ಗಳಿಸಬೇಕು ಎಂದರು.
ಕುಮಾರಿ ಅನನ್ಯ ಸ್ವಾಗತಿಸಿದರು, ಕುಮಾರಿ ಆಲ್ಬ ನಿರೂಪಿಸಿದರು, ಏಬಲ್ ಬ್ಲೆಸನ್ ಥಾಮಸ್ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಿಕ್ಷಕಿಯರಾದ ವೆರೋನಿಕ, ನಯನ, ಮಮತಾ, ಪೂರ್ಣಿಮಾ ಶೆಣೈ, ಯಮುನ, ದೀಪಿಕಾ, ಅಕ್ಷತಾ ಏಳು ವೇದಿಕೆಗಳನ್ನು ಮಾಡಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.