ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಭಾನುವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಸವಾರಿ ನಡೆಸಿದೆ.
ಹೊಸಮಠ ಕಡೆಗೆ ತೆರಳಿದೆ. ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ. ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ.
ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಆಗಮಿಸಿ ಪರಿಶೀಲನೆ ನಡೆಸಿದೆ.