ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ.ವ್ಯಾಪ್ತಿಯ ಕಾಪಿನಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನ.20ರ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ
ಸಾಮಾಜಿಕ ಹೋರಾಟಗಾರ, ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್.ಟಿ., ನ್ಯಾಯವಾದಿ ಬಿ.ಎಂ.ಭಟ್, ಕೆ.ಆರ್.ಎಸ್.ಪಕ್ಷದ ವೇಣುಗೋಪಾಲ್, ಈಶ್ವರಿ ಅವರು ನೇತೃತ್ವ ವಹಿಸಿದ್ದು, ತಹಶೀಲ್ದಾರ್ ಕಚೇರಿ ಪಕ್ಕದ ರಸ್ತೆ ಬದಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ವೃದ್ದ ದಂಪತಿ ನಜ್ಜುಗುಜ್ಜುಗೊಂಡ ಪಾತ್ರೆ ಪರಿಕರಗಳ ಜೊತೆ ಆಗಮಿಸಿ ಉರಿ ಬಿಸಿಲಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಾನ ಮನಸ್ಕರು ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.
ಮನೆ ಕಳೆದುಕೊಂಡ ವೃದ್ದ ದಂಪತಿ ನನಗೆ ಜೀವ ಬೇಡ ಎಂದು ನೆಲದಲ್ಲಿ ಒದ್ದಾಡಿದ್ದು, ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನೋಡುತ್ತಿರುವುದು ಕಂಡು ಬಂತು. ಪ್ರತಿಭಟನೆಗೆ ಅನುಮತಿ ಇಲ್ಲ ಎಂದು ಅಧಿಕಾರಿ ಹೇಳಿದ ಹಿನ್ನೆಲೆ ಪ್ರತಿಭಟನಾಕಾರರು ಆಕೋಶಗೊಂಡು ರಸ್ತೆ ಸಮೀಪ ಗುಂಪು ಸೇರಿದ್ದಾರೆ.
ಕಡಬ ಠಾಣಾ ಎಸ್.ಐ. ಅಭಿನಂದನ್ ಹಾಗೂ ನೆರೆಯ ಠಾಣೆಗಳ ಪೊಲೀಸರು ಬಂದೋ ಬಸ್ತ್ ಏರ್ಪಡಿಸಿದ್ದಾರೆ. ಹೋರಾಟಗಾರರಾದ ಹಕೀಮ್ ಕೊಕ್ಕಡ, ಸಿಮಿ ಉಂಡಿಲ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.