![](https://i0.wp.com/nesaranewsworld.com/wp-content/uploads/2024/11/14-sky-620x372-1-1.jpg?resize=980%2C1280&ssl=1)
ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಕ್ಷೇತ್ರದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.20ರಂದು ಸಂಜೆ ನಡೆದಿದೆ.
ಹಲ್ಲೆಗೊಳಗಾದ ಮಹೇಂದ್ರ ಕೊಲ್ಲಾಜೆಪಳಿಕೆ ಅವರ ತಲೆಗೆ ಗಂಭೀರ ಏಟು ತಗಲಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹೇಂದ್ರ ಅವರು ತನ್ನ ಮೊಬೈಲ್‌ನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಛತೆಗೊಳಿಸುತ್ತಿದ್ದ ಸಂದರ್ಭ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದವರು ಹಲ್ಲೆ ನಡೆಸಿದರೆನ್ನಲಾಗಿದೆ. ಘಟನೆಗೆ ಸ್ವಷ್ಟ ಕಾರಣ ತಿಳಿದು ಬಂದಿಲ್ಲ, ಆದರೆ ಶೌಚಾಲಯದಲ್ಲಿ ಮೊಬೈಲ್ ಇರುವುದನ್ನು ಕಂಡ ಯಾತ್ರಾರ್ಥಿಗಳು ವಿಡಿಯೋ ಮಾಡುತ್ತಿದ್ದಾನೆ ಎಂದು ಸಂಶಯಿಸಿ ಹಲ್ಲೆ ನಡೆಸಿದ್ದರೆನ್ನಲಾಗಿದೆ.
ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಲ್ಲೆ ನಡೆಸಿದವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
![](https://i0.wp.com/nesaranewsworld.com/wp-content/uploads/2024/04/WhatsApp-Image-2023-06-19-at-2.49.48-PM-3.jpeg?resize=723%2C1024&ssl=1)
![](https://i0.wp.com/nesaranewsworld.com/wp-content/uploads/2024/01/WhatsApp-Image-2023-09-29-at-10.07.05.jpg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2024/05/WhatsApp-Image-2024-05-06-at-1.20.05-PM.jpeg?resize=910%2C1024&ssl=1)
![](https://i0.wp.com/nesaranewsworld.com/wp-content/uploads/2024/06/WhatsApp-Image-2024-01-20-at-2.32.04-PM-2.jpeg?resize=712%2C1024&ssl=1)
![](https://i0.wp.com/nesaranewsworld.com/wp-content/uploads/2024/05/WhatsApp-Image-2024-05-01-at-7.14.27-PM.jpeg?resize=682%2C1024&ssl=1)
![](https://i0.wp.com/nesaranewsworld.com/wp-content/uploads/2024/01/WhatsApp-Image-2024-01-20-at-2.32.04-PM-1.jpeg?resize=712%2C1024&ssl=1)