ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ನರೇಗಾ ಯೋಜನೆ ಅನುದಾನದಡಿಯಲ್ಲಿ ನಿರ್ಮಾಣವಾದ ಅಂಗವಿಕಲ ಸ್ನೇಹಿ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮ ಪುತ್ತಿಗೆ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರದಂದು ನಡೆಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿ ವಿದ್ಯಾರ್ಥಿಗಳು ಹೆಚ್ಚಿನ ಒತ್ತನ್ನು ಶುಚಿತ್ವಕ್ಕೆ ಮತ್ತು ನೈರ್ಮಲ್ಯಕ್ಕೆ ನೀಡಬೇಕು ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸವನ್ನು ಮಾಡಿ ಉನ್ನತ ಹುದ್ದೆಗೆ ಏರಬೇಕು ವಿದ್ಯಾಭ್ಯಾಸ ಮುಗಿದ ನಂತರ ಕೃಷಿ, ಹೈನುಗಾರಿಕೆ ಮತ್ತು ಗೃಹ ಕೈಗಾರಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.
ಕಾರ್ಯಕ್ರಮದಲ್ಲಿ ಕಡ್ಯಾ ಕೋಣಾಜೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರುಕ್ಮಿಣಿ, ಉಪಾಧ್ಯಕ್ಷರಾದ ನವೀನ್, ಗ್ರಾಮ ಪಂಚಾಯಿತಿ ಸದಸ್ಯರಾದ ಮೈತ್ರಿ ಕೆಳಗಿನಮನೆ, ಶಿವಪ್ಪಗೌಡ ಹಾಗೂ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಾದ ಪದ್ಮನಾಭ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೂರಪ್ಪ ಗೌಡ ಕನಿಯ, ಮಾಜಿ ಜಿಲ್ಲಾ ಪಂಚಾಯಿತಿಯ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾದ ಭಾಸ್ಕರ ಇಚ್ಚಲಂಪಾಡಿ, ಎಸ್ ಡಿ ಎಮ್ ಸಿ ಉಪಾಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಶಾಲಾ ಶಿಕ್ಷಕರು, ಪೂರ್ವ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಭಾರ ಮುಖ್ಯಶಿಕ್ಷಕ ಮಧುಸೂಧನ.ಕೆ.ಎ. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.