ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಅಂಬಿಕಾ ಪದವಿಪೂರ್ವ ಕಾಲೇಜು ಪುತ್ತೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ವಿಭಾಗದ ಜನಪದ ಗೀತೆ ಸ್ಪರ್ಧೆಯಲ್ಲಿ ಮಯೂರ ಪ್ರಥಮ, ಚಿತ್ರಕಲೆ ಸ್ಪರ್ಧೆಯಲ್ಲಿ ಸಾತ್ವಿಕ್ ಪ್ರಥಮ, ಕನ್ನಡ ಅಶುಭಾಷಣ ಸ್ಪರ್ಧೆಯಲ್ಲಿ ಸುಮೇಧ ಗಾಂವ್ಕಾರ್ ದ್ವಿತೀಯ, ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಸುಶ್ಮಿತಾ ದ್ವಿತೀಯ, ರಸ ಪ್ರಶ್ನೆ ಸ್ಪರ್ಧೆಯಲ್ಲಿ ವಿಷ್ಣು ಮತ್ತು ಪ್ರಖ್ಯಾತ್ ತೃತೀಯ ಬಹುಮಾನ ಪಡೆದಿದ್ದಾರೆ.
ಪ್ರಥಮ ಪಿಯುಸಿ ವಿಭಾಗದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ತನುಶ್ರೀ ಪ್ರಥಮ, ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಅರ್ಪಿತಾ ಅಡಿಗ ದ್ವಿತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಣವ್ ಕೃಷ್ಣ ಮತ್ತು ಕಾರ್ತಿಕ್ ದ್ವಿತೀಯ, ಭಕ್ತಿಗೀತೆ ಸ್ಪರ್ಧೆಯಲ್ಲಿ ಸಂಕೇತ್ ದ್ವಿತೀಯ, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಹಂಸಿನಿ ಭಿಡೆ ತೃತೀಯ, ಭಾವ ಗೀತೆ ಸ್ಪರ್ಧೆಯಲ್ಲಿ ರೇವಂತ್ ತೃತೀಯ ಬಹುಮಾನ ಪಡೆದಿದ್ದಾರೆ.
ಬಹುಮಾನ ಪಡೆದ ಒಟ್ಟು ಹದಿಮೂರು ವಿದ್ಯಾರ್ಥಿಗಳಲ್ಲಿ ಒಂಬತ್ತು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್, ಉಪ ಪ್ರಾಂಶುಪಾಲರಾದ ರಾಜೇಶ್.ಬಿ., ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗರಾಜ್ ಮತ್ತು ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.