
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೆಂಗುಡೇಲು ನಿವಾಸಿ ಪೂವಣಿ ಗೌಡ(54) ಎಂಬುವರು ಅವರ ಜಾಗದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 24ರಂದು ನಡೆದಿದೆ.
ಕೃಷಿಕರಾಗಿದ್ದ ಪೂವಣಿ ಗೌಡರು ಸಾಲದ ಬಾಧೆಯಿಂದಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮನೆಯವರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಮೃತರಿಗೆ ಪತ್ನಿ, ಗಂಡು ಹಾಗೂ ಹೆಣ್ಣು ಮಕ್ಕಳು ಇದ್ದಾರೆ.







