ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಶೇರ್ ಮಾಡಿ

ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಪಥಸಂಚಲನದಲ್ಲಿ ವಿದ್ಯಾರ್ಥಿಗಳ ಗೌರವವಂದನೆಯನ್ನು ರಾಮಕುಂಜ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್. ಜಿ ಇವರು ಸ್ವೀಕರಿಸಿದರು. ಖ್ಯಾತ ಕಬ್ಬಡಿ ತರಬೇತುದಾರ ಬಾಲಕೃಷ್ಣ. ರೈ ಪೋರ್ದೆಲ್ ಇವರು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ನೆಲ್ಯಾಡಿ ಸೂರ್ಯನಗರದ ಶ್ರೀರಾಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗಣೇಶ ವಾಗ್ಲೆ ಧ್ವಜಾರೋಹಣ ನೆರವೇರಿಸಿದರು

ಗೌರವವಂದನೆಯನ್ನು ಸ್ವೀಕರಿಸಿದ ಮೋಹನ್ ಕುಮಾರ್.ಜಿ ಇವರು ಮಾತನಾಡುತ್ತಾ” ಶ್ರೀರಾಮಕುಂಜೇಶ್ವರ ವಿದ್ಯಾಸಂಸ್ಥೆಗಳು ರಾಜ್ಯ ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿದ ಸಂಸ್ಥೆ. ಕೇವಲ ಪಠ್ಯಕ್ಕೆ ಸಂಬಂಧಪಟ್ಟ ಕಲಿಕೆ ಮಾತ್ರವಲ್ಲದೆ ಪಠ್ಯೇತರ ಸಾಧನೆಗಳಲ್ಲಿಯೂ ಕೂಡ ರಾಮಕುಂಜದ ವಿದ್ಯಾರ್ಥಿಗಳು ಹೆಸರನ್ನು ಗಳಿಸಿದ್ದಾರೆ. ವಿದ್ಯಾರ್ಥಿಗಳೆಲ್ಲರೂ ನಿರಂತರ ಸಾಧನೆಯ ಮೂಲಕ ಊರಿಗೆ ಹೆಸರು ತರಬೇಕು”  ಎಂದು ಕರೆ ಕೊಟ್ಟರು.

ಗಣೇಶ ವಾಗ್ಲೆಯವರು ಧ್ವಜಾರೋಹಣವನ್ನ ಗೈದು ಮಾತನಾಡುತ್ತಾ ” ಹಿಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಭಾಗವಹಿಸುವವರು ಕಡಿಮೆ ಅಂಕಗಳನ್ನು ಗಳಿಸುತ್ತಾರೆ ಎಂಬುದು ಪ್ರಚಲಿತದಲ್ಲಿ ಇತ್ತು. ಆದರೆ ಇವತ್ತು ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕೂಡ ಉನ್ನತ ಅಂಕಗಳನ್ನು ಗಳಿಸುವುದರ ಮೂಲಕ ಸರ್ವ ರೀತಿಯಲ್ಲಿಯೂ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವಿದೆ ಎಂದು ತೋರಿಸಿ ಕೊಡುತ್ತಿದ್ದಾರೆ. ವಿದ್ಯಾರ್ಥಿಗಳ ಇಂತಹ ಸರ್ವತೋಮುಖ ಬೆಳವಣಿಗೆಯೇ ಕ್ರೀಡೆಯ ಮೂಲ ಉದ್ದೇಶ. ವಿದ್ಯಾರ್ಥಿಗಳಿಲ್ಲರೂ ಕೂಡ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆಯನ್ನು ಮಾಡುವಂತಾಗಲಿ” ಎಂದು ಹೇಳಿದರು.

ಕ್ರೀಡಾ ಜ್ಯೋತಿಯನ್ನ ಬೆಳಗಿಸಿದ ಬಾಲಕೃಷ್ಣ.ರೈ ಪೋರ್ದೆಲ್ ಇವರು ಮಾತನಾಡುತ್ತಾ “ವಿದ್ಯಾರ್ಥಿಗಳು ಶಾರೀರಿಕವಾಗಿ ಬಲಿಷ್ಠರಾಗಬೇಕು. ಸ್ವಾಮಿ ವಿವೇಕಾನಂದರು ಹೇಳುವಂತೆ ಸ್ವಸ್ಥ ದೇಹ ಮಾತ್ರವೇ ಸ್ವಸ್ಥ ಮನಸ್ಸನ್ನು ನಿರ್ಮಾಣ ಮಾಡಬಹುದು. ಯಾವಾಗ ಉತ್ತಮ ವ್ಯಕ್ತಿತ್ವದ ನಿರ್ಮಾಣವಾಗುತ್ತದೆಯೋ, ಆಗ ಉತ್ತಮ ದೇಶದ ನಿರ್ಮಾಣ ಸಾಧ್ಯ.ಉತ್ತಮ ವ್ಯಕ್ತಿಗಳ ನಿರ್ಮಾಣವಾಗಬೇಕಾದರೆ ಉತ್ತಮ ಗುರುಗಳ ಅವಶ್ಯಕತೆ ಖಂಡಿತವಾಗಿಯೂ ಇದೆ. ರಾಮಕುಂಜದಲ್ಲಿರುವ ಶೈಕ್ಷಣಿಕ ವಾತಾವರಣ ಇವೆಲ್ಲವನ್ನೂ ಕೂಡ ವಿದ್ಯಾರ್ಥಿಗಳಿಗೆ ನೀಡುತ್ತದೆ” ಎಂದು ಹೇಳಿದರು.

ಅಧ್ಯಕ್ಷೀಯ ನೆಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಾಕೃಷ್ಣ. ಕೆ.ಎಸ್ ಇವರು ಸಂದರ್ಭೋಚಿತವಾಗಿ ಮಾತನಾಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಏರೋಬಿಕ್ಸ್ ಪ್ರದರ್ಶನ, ಕಾಲೇಜು ವಿದ್ಯಾರ್ಥಿಗಳಿಂದ ಪಿರಮಿಡ್ ಪ್ರದರ್ಶನ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಒಳಗೊಂಡ ಶ್ರೀ ಕಪಿಲೇಶ್ವರ ಕಲಾ ಸಮಿತಿ ಕೊಯಿಲ ಇವರಿಂದ ಆಕರ್ಷಕ ಚೆಂಡೆ ಪ್ರದರ್ಶನವು ನಡೆಯಿತು.

ಪಿಡಬ್ಲ್ಯೂಸಿ ಸಂಸ್ಥೆಯ ಮುಖ್ಯಸ್ಥರಾದ ಚಂದ್ರಕಾಂತ್ ಶುಭಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್.ಕೆ ಮತ್ತು ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಸತೀಶ್ ಭಟ್ ಉಪಸ್ಥಿತರಿದ್ದರು.
ಬೆಂಗಳೂರಿನ ಪಿಡಬ್ಲ್ಯೂಸಿ ಸಂಸ್ಥೆಯ ಸಿಬ್ಬಂದಿಗಳು ಸ್ವಯಂಸೇವಕರಾಗಿ ಸಹಕರಿಸಿದರು.

ಅಧ್ಯಾಪಕ ಪ್ರವೀಣ್ ಕುಮಾರ್ ಎಲ್ಲರನ್ನು ಸ್ವಾಗತಿಸಿದರು. ಉಪನ್ಯಾಸಕರಾದ ವಸಂತ ಕುಮಾರ್. ಡಿ ಧನ್ಯವಾದ ಸಮರ್ಪಿಸಿದರು. ಅಧ್ಯಾಪಿಕೆ ಉಷಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಗಣೇಶ್. ಕೆ ಮತ್ತು ದೈಹಿಕ ಶಿಕ್ಷಕಿ ಪ್ರಫುಲ್ಲ.ರೈ ಕಾರ್ಯಕ್ರಮ ಸಂಯೋಜಿಸಿದರು. ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕ್ರೀಡಾಕೂಟದ ಯಶಸ್ಸಿಗೆ ಸಕ್ರಿಯವಾಗಿ ಸಹಕರಿಸಿದರು.

Leave a Reply

error: Content is protected !!