ಕಡಬ ಸೈಂಟ್ ಆನ್ಸ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಶೇರ್ ಮಾಡಿ

ಕಡಬ ಇಲ್ಲಿನ ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಶಾಲೆಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ನಡೆಯಿತು.

ಸಂಸ್ಥೆಯ ಸಂಚಾಲಕ ವಂ.ಪ್ರಕಾಶ್ ಪೌಲ್ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತ ಪ್ರತಿಭೆ ಇರುತ್ತದೆ. ಅದನ್ನು ಬೆಳಕಿಗೆ ತರುವಲ್ಲಿ ಪ್ರತಿಭಾ ಪ್ರದರ್ಶನದಂತಹ ಕಾರ್ಯಕ್ರಮಗಳು ವೇದಿಕೆ ಒದಗಿಸುತ್ತದೆ ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಪೃಥ್ವಿ ಪರಿಯಾರಂ, ಸಂಶೋಧನಾ ವಿದ್ವಾಂಸೆ ಸ್ನೇಹ ಸಾಜಿ ಶುಭ ಹಾರೈಸಿದರು. ಸಂಸ್ಥೆಯ ವತಿಯಿಂದ ಅವರನ್ನು ಗೌರವಿಸಲಾಯಿತು.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನಡೆದ ಸಾಂಸ್ತ್ರತಿಕ ಮತ್ತು ಆಟೋಟ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಜೇಸಿಂತಾ ವೇಗಸ್, ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷ ಗಿರಿಧರ್ ರೈ, ಸೈಂಟ್ ಪ್ರಾಂಶುಪಾಲ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಜೋಕಿಮ್ಸ್ ಪಿ ಯು ಕಾಲೇಜ್ ಪ್ರಾಂಶುಪಾಲ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಲತಾ, ಸೈಂಟ್ ಜೋಕಿಮ್ಸ್ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಸಿಸ್ಟರ್ ಹಿಲ್ದಾ ರೋಡ್ರಿಗಸ್, ಸೈಂಟ್ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷಾ ಉಪಸ್ಥಿತರಿದ್ದರು.

ಸಹಶಿಕ್ಷಕಿ ದಿವ್ಯಜ್ಯೋತಿ ಸ್ವಾಗತಿಸಿದರು, ಪೂರ್ಣಿಮಾ ವಂದಿಸಿದರು. ಆನಿ ಜೋಸೆಫ್ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!