ಕುಕ್ಕೆ: ಮೂಲ ಮೃತ್ತಿಕಾ ಪ್ರಸಾದ ವಿತರಣೆ

ಶೇರ್ ಮಾಡಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಗರ್ಭಗುಡಿಯಿಂದ ಮೂಲ ಮೃತ್ತಿಕೆ ಪ್ರಸಾದವನ್ನು ತೆಗೆದು ಭಕ್ತರಿಗೆ ವಿತರಿಸಿದರು.

ಅಪಾರ ಸಂಖ್ಯೆಯಲ್ಲಿ ಭಕ್ತರು ಬೆಳಗ್ಗೆ 10 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು, ಮೃತ್ತಿಕಾ ಪ್ರಸಾದ ಪಡೆದುಕೊಂಡರು. ಮಧ್ಯಾಹ್ನ 2 ಗಂಟೆಯ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಏಕಾದಶಿ ದಿನವಾದ್ದರಿಂದ ದೇವರ ದರ್ಶನದ ಬಳಿಕ ಆಯ್ದ ಸೇವೆಗಳನ್ನು ಭಕ್ತರು ನೆರವೇರಿಸಿದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ, ಕಡಬ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಸ್ಟರ್‌ಪ್ಲಾನ್‌ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಅಚ್ಚುತ ಆಲ್ಕಬೆ, ದೇವಸ್ಥಾನದ ಸಿಬ್ಬಂದಿ, ಭಕ್ತರು ಇದ್ದರು.

Leave a Reply

error: Content is protected !!