ಪಾಣೆಮಂಗಳೂರು ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು,ಕೆಲ ಹೊತ್ತುಗಳ ಕಾಲ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ನ.29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ.
ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.
ಘಟನೆಯಿಂದ ಸುಮಾರು ಒಂದು ತಾಸಿಗಿಂತಲೂ ಅಧಿಕೃತವಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರು ಮತ್ತು ಲಾರಿಯನ್ನು ರಸ್ತೆಯಿಂದ ಬದಿಗೆ ಸರಿಸಿದ ಬಳಿಕ ಟ್ರಾಫಿಕ್ ಕ್ಲಿಯರ್ ಆಗಿದೆ.