ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ

ಶೇರ್ ಮಾಡಿ

ಕಡಬ: ಕುಂತೂರುಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ.

ಸಮ್ಮೇಳನದ ಉದ್ಘಾಟನೆಗೆ ಮೊದಲು ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ ನಡೆಯಿತು ಪದವು ಸೈಂಟ್ ಜಾರ್ಜ್ ಆರ್ಥೋಡಾಕ್ಸ್ ಚಚ್೯ನ ಮುಂಭಾಗದಿಂದ ಸಮ್ಮೇಳನದ ವೇದಿಕೆ ತನಕ ಮೆರವಣಿಗೆ ನಡೆಯಿತು. ಯಕ್ಷ ಪಾಂಡವ ಮಹಾದ್ವಾರದ ಮೂಲಕ ಮೆರವಣಿಗೆ ಸಮ್ಮೇಳನದ ವೇದಿಕೆಗೆ ಆಗಮಿಸಿತು. ಪೆರಾಬೆ ಗ್ರಾ.ಪಂ.ಸದಸ್ಯ ಪಿ.ಜಿ.ರಾಜು ಮೆರವಣಿಗೆ ಉದ್ಘಾಟಿಸಿದರು. ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿದರು. ಸಮ್ಮೇಳನಾಧ್ಯಕ್ಷ ಎನ್.ಕರುಣಾಕರ ಗೋಗಟೆ ಹೊಸಮಠ, ಕನ್ನಡ ಸಾಹಿತ್ಯ ಪರಿಷತ್ ದ ಕ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ ರೈ ಅವರನ್ನು ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಕರೆತರಲಾಯಿತು. ಕಲಶ ಹೊತ್ತ ಮಹಿಳೆಯರು, ಚೆಂಡೆ ಸದ್ದು, ಗೊಂಬೆ ಕುಣಿತ ಮೆರವಣಿಗೆಗೆ ಮೆರುಗು ನೀಡಿತು. ಸಮ್ಮೇಳನದ ಆತಿಥ್ಯ ವಹಿಸಿಕೊಂಡ ಕುಂತೂರುಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳ ಜೊತೆಗೆ ಕುಂತೂರು ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮಕುಂಜ ಆಂಗ್ಲ ಮಾಧ್ಯಮ ಶಾಲೆ, ಕಡಬ ಸೈಂಟ್ ಆನ್ಸ್, ಆಲಂಕಾರು ದುರ್ಗಾಂಬಾ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪದಾಧಿಕಾರಿಗಳು, ಸ್ವಾಗತ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಪ್ರದರ್ಶನ ಮಳಿಗೆ ಉದ್ಘಾಟನೆ:
ಕಲಾ ಪ್ರದರ್ಶನವನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮಾಜಿ ಸಂಚಾಲಕ ರಾಯ್ ಅಬ್ರಹಾಂ, ಪುಸ್ತಕ ಪ್ರದರ್ಶನ ಮಳಿಗೆಯನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮಿತಿ ಸದಸ್ಯ ಮಹಮ್ಮದ್ ಕುಂಞಿ, ಪ್ರಾಚ್ಯವಸ್ತು ಪ್ರದರ್ಶನ ಮಳಿಗೆಯನ್ನು ಸ್ವಾಗತ ಸಮಿತಿ ಅಧ್ಯಕ್ಷ ಗುರುರಾಜ್ ರೈ ಉದ್ಘಾಟಿಸಿದರು.

ಧ್ವಜಾರೋಹಣ:
ಪೆರಾಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಧ್ಯಾ ಕೆ., ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ ದ ಕ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಅವರು ಪರಿಷತ್ತು ಹಾಗೂ ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ.ರೈ ಅವರು ನಾಡ ಧ್ವಜಾರೋಹಣ ನೆರವೇರಿಸಿದರು. ಕುಂತೂರು ಪದವು ಸಂತ ಜಾರ್ಜ್ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಗೀತೆ ಹಾಡಿದರು.

Leave a Reply

error: Content is protected !!