ನೆಲ್ಯಾಡಿ: ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ಶಾಲಾ ಹಿರಿಯ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಬಜತ್ತೂರು – ವಳಾಲು ಸ.ಹಿ.ಪ್ರಾ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಭವಿಷ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ಹರೀಶ್ ಗೌಡ ಮತ್ತು ಉಷಾ ದಂಪತಿಯ ಸುಪುತ್ರಿ. ವಿದ್ಯಾರ್ಥಿಗೆ ಶಾಲಾ ಸಹಶಿಕ್ಷಕಿ ಪವಿತ್ರಾ ಮಾರ್ಗದರ್ಶನ ನೀಡಿದ್ದರು. ವಿಜೇತ ವಿದ್ಯಾರ್ಥಿಯನ್ನು ಶಾಲಾ ಮುಖ್ಯಶಿಕ್ಷಕ ಮಂಜುನಾಥ್.ಕೆ.ವಿ, ಸಹಶಿಕ್ಷಕರು,ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.