ಫೈಂಜಲ್ ಚಂಡಮಾರುತದ ಕಾರಣ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜು ಗಳಿಗೆ ಡಿ.3ರ ಮಂಗಳವಾರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಡಿ.2 ಮತ್ತು 3ರಂದು, ದಕ್ಷಿಣ ಕರ್ನಾಟಕ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 35 ಕಿಲೋಮೀಟರ್‌ನಿಂದ 45 ಕಿಮೀ ಅಥವಾ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ್ದು ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಡಿಸೆಂಬರ್ 3ಕ್ಕೆ ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ