
ನೆಲ್ಯಾಡಿ: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಭವಿಕ್ ಕುಮಾರ್ ಹಿಂದಿ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, ಆದ್ಯ.ಜಿ.ಕೆ ಛದ್ಮವೇಷ ಕಿರಿಯ ವಿಭಾಗದಲ್ಲಿ ಪ್ರಥಮ, ಶ್ರೀಶಾ ಕಿರಿಯ ವಿಭಾಗದ ಅಭಿನಯ ಗೀತೆಯಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್, ಸಂಯೋಜಕರಾದ ರೆ.ಫಾ ಜಿಜನ್, ಮುಖ್ಯಶಿಕ್ಷಕ ಯಶೋಧರ ಹಾಗೂ ಶಿಕ್ಷಕರು ಅಭಿನಂದಿಸಿದರು.






