ನೆಲ್ಯಾಡಿ: ಮಹಿಳಾ ಆರೋಗ್ಯ ಹಾಗೂ ನೈರ್ಮಲ್ಯ ಕುರಿತು ಉಪನ್ಯಾಸ

ಶೇರ್ ಮಾಡಿ

ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜು ಇಲ್ಲಿನ ಮಹಿಳಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಮಹಿಳಾ ಆರೋಗ್ಯ ಹಾಗೂ ನೈರ್ಮಲ್ಯ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ನೆಲ್ಯಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಶಿಶಿರ ಅವರು ಮಹಿಳೆಯರ ಆರೋಗ್ಯ ಹಾಗೂ ನೈರ್ಮಲ್ಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹದಿಹರೆಯದಲ್ಲಿ ಆರೋಗ್ಯದಲ್ಲಿ ಆಗುವ ಬದಲಾವಣೆಗಳು, ಸಮಸ್ಯೆಗಳು, ರೋಗಗಳನ್ನು ತಡೆಗಟ್ಟಲು ಮಾಡಬೇಕಾದ ಪರಿಹಾರಗಳು, ಪೌಷ್ಟಿಕ ಆಹಾರ ಸೇವನೆಯ ಪ್ರಾಮುಖ್ಯತೆ ಹಾಗೂ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಇರುವ ಗೊಂದಲಗಳಿಗೆ ಸೂಕ್ತ ಪರಿಹಾರವನ್ನು ನೀಡುತ್ತಾ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆಯಾದ ಶ್ರೀಮತಿ ವೆರೋನಿಕಾ ಪ್ರಭಾರವರು ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿವಹಿಸಿದರೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.

ಮಹಿಳಾ ಸಂಘದ ಸಂಚಾಲಕರಾದ ಪಾವನ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶ್ರುತಿ ಅವರು ವಂದಿಸಿದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!