ಮಂಗಳೂರಿನಲ್ಲಿ ಉದ್ಯೋಗಾಕಾಂಕ್ಷಿಗಳಿಗಾಗಿ ಬೃಹತ್ ಉದ್ಯೋಗ ಮೇಳ

ಶೇರ್ ಮಾಡಿ

ನೇಸರ ಮಾ.02: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ,ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾ.03ರ ಗುರುವಾರ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೊಟ್ಟಾರ – ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ‌ “ಬೃಹತ್ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ‌ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ, ಕಿರ್ಲೋಸ್ಕರ್, ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

“ಸದ್ಭಾವನಾ ಸಮಾವೇಶ” ವೀಕ್ಷಿಸಿ Subscribers ಮಾಡಿ

ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ‌ ಅಶ್ವತ್ ನಾರಾಯಣ್ ಅವರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು
www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

—ಜಾಹೀರಾತು—

Leave a Reply

error: Content is protected !!