ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ

ಶೇರ್ ಮಾಡಿ

ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸದ್ರಿ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ನಡೆದಿರುವ ಘಟನೆ ಡಿ.6ರಂದು ನಡೆದಿದೆ.

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸರ್ವೆ ನಂ.123/1ರ ಸರಕಾರಿ ಜಾಗದಲ್ಲಿ ರೇಣುಕಾ ಕೋಂ ವಿಶ್ವನಾಥ ಎಂಬವರು ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಡಬ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ನ.13ರಂದು ತೆರವು ಮಾಡಲಾಗಿತ್ತು. ಅದೇ ಸ್ಥಳದಲ್ಲಿ ಪುನ: ಕಟ್ಟಡವನ್ನು ನಿರ್ಮಿಸುತ್ತಿರುವುದಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಡಿ.6ರಂದು ಗ್ರಾಮ ಆಡಳಿತಾಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ರೇಣುಕಾರವರ ತಂದೆ ಮುತ್ತುಸ್ವಾಮಿ ಮತ್ತು ಇತರರು ಹಲ್ಲೆ ಮಾಡಿದ್ದು ಮನೆ ನಿರ್ಮಾಣವನ್ನು ಮುಂದುವರೆಸಿರುತ್ತಾರೆ. ಗಾಯಗೊಂಡ ಗ್ರಾಮ ಆಡಳಿತಾಧಿಕಾರಿಯವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಕಾರಿ ಕರ್ತವ್ಯದಲ್ಲಿದ್ದ ನೌಕರನ ಮೇಲೆ ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕಡಬ ತಹಶೀಲ್ದಾರ್ ಅವರು ದ.ಕ.ಜಿಲ್ಲಾಧಿಕಾರಿಯವರಿಗೆ, ಪುತ್ತೂರು ಉಪ ಸಹಾಯಕ ಆಯುಕ್ತರಿಗೆ ಹಾಗೂ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ.

Leave a Reply

error: Content is protected !!