ಉಜಿರೆ: ಶಿರಸಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಹಾಗೂ ಮಂಗಳೂರು ಸಂಸ್ಕೃತ ಸಂಘದ ಸಹಯೋಗದಲ್ಲಿ ಮಂಗಳೂರಿನ ಶಾರದಾ ಪ.ಪೂ ಕಾಲೇಜಿನಲ್ಲಿ ‘ಭಗವದ್ಗೀತೆಯಲ್ಲಿ ಭ್ರಾತೃತ್ವ’ ಎನ್ನುವ ವಿಷಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯಶಾಸ್ತ್ರ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರಥಮ ಸ್ಥಾನ ಪಡೆದು ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ವತಿಯಿಂದ ಡಿ.13 ರಂದು ವಿಜಯಪುರದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.