ಕಡಬ ಒಕ್ಕೂಟದ ಮಾಸಿಕ ಸಭೆ ಮತ್ತು ಲಾಭಾಂಶ ವಿತರಣಾ ಕಾರ್ಯಕ್ರಮ

ಶೇರ್ ಮಾಡಿ

ಕಡಬ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ ತಾಲೂಕು ಕಡಬ ವಲಯ ಕಡಬ ಒಕ್ಕೂಟದ ಮಾಸಿಕ ಸಭೆ ಮತ್ತು ಲಾಭಾಂಶ ವಿತರಣಾ ಕಾರ್ಯಕ್ರಮವು ಪ್ರಾಥಮಿಕ ಶಾಲೆ ಕಡಬದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಕಡಬ ಒಕ್ಕೂಟದ ಅಧ್ಯಕ್ಷರಾದ ನಳಿನಿ. ರೈ ವಹಿಸಿದರು. ಕಡಬ ವಲಯದ ಮೇಲ್ವಿಚಾರಕರಾದ ವಿಜೇಶ್ ಜೈನ್ ಪ್ರಾಸ್ತಾವಿಕ ಮಾತನಾಡಿದರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರಾದ ಸರೋಜಿನಿ.ಎಸ್ ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಡಬ ವಲಯ ಒಕ್ಕೂಟಗಳ ವಲಯ ಅಧ್ಯಕ್ಷರಾದ ರಮೇಶ್.ರೈ ಅರ್ಪಜೆ ಲಾಭಾಂಶ ವಿತರಿಸಿ ಲಾಭಂಶದ ಮೊತ್ತವನ್ನು ಉತ್ತಮ ಉದ್ದೇಶಗಳಿಗೆ ಬಳಸಿಕೊಳ್ಳುವಂತೆ ಶುಭಹಾರೈಸಿದರು. ಒಕ್ಕೂಟದ ಪದಾಧಿಕಾರಿಗಳು ಸಂಘದ ಸದಸ್ಯರು ಉಪಸ್ಥಿತರಿದ್ದರು,

ಸಂಘದ ಸದಸ್ಯರಾದ ಅಬ್ದುಲ್ ಲತೀಪ್ ಸ್ವಾಗತಿಸಿದರು, ಕಡಬ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಸವಿತಾ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Leave a Reply

error: Content is protected !!