ವಿದ್ಯುತ್ ಶಾಕ್: ಬಾಲಕ ಸಾವು

ಶೇರ್ ಮಾಡಿ

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿ,ಬಾಲಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ತಾಲೂಕಿನ ಪೆರೋಡಿತ್ತಾಯನ ಕಟ್ಟೆ ಶಾಲೆ ಬಳಿ ನಿವಾಸಿ ಬೆಳ್ತಂಗಡಿ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ದಿ.ಸ್ಟ್ಯಾನ್ಲಿ ಡಿಸೋಜ ಅವರ ಪುತ್ರ ಸ್ಟೀಫನ್ (14), ಮನೆಗೆ ಕ್ರಿಸ್ಮಸ್ ಅಂಗವಾಗಿ ಸಂಜೆ ಸಾಂತಾ ಕ್ಲೋಸ್ ಬರುವ ಹಿನ್ನೆಲೆಯಲ್ಲಿ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟರು.

ಕಳೆದ ಕೆಲವು ವರ್ಷಗಳ ಹಿಂದೆ ಹೆತ್ತವರನ್ನು ಕಳೆದುಕೊಂಡಿದ್ದ ಅವರು ಅಜ್ಜಿ ಹಾಗೂ ಮಾವನ ಆಶ್ರಯದಲ್ಲಿದ್ದರು. ಘಟನೆ ನಡೆದ ಸಮಯ ಮನೆಯಲ್ಲಿ ಅಜ್ಜಿ ಮಾತ್ರ ಇದ್ದರು ಎಂದು ತಿಳಿದುಬಂದಿದೆ. ಬಳಿಕ ಬಂದ ಮಾವ ವಿದ್ಯುತ್ ಸಂಪರ್ಕವನ್ನು ತಪ್ಪಿಸಿ ಬಾಲಕನ ರಕ್ಷಣೆಗೆ ಮುಂದಾದ ಕಾರಣ ಅವರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

  •  

Leave a Reply

error: Content is protected !!