ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.26) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಘಟನೆ ನಡೆದಿದೆ.
ಧನುಶ್ರೀ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಸೋಮವಾರ ಸಂಜೆ 7.30ಗೆ ಕಾಲೇಜು ಮುಗಿಸಿ ಮನೆಗೆ ಬಂದಾಗ ಘಟನೆ ನಡೆದಿದೆ.
ಮೊಬೈಲ್ ಹಾಗೂ ಟಿವಿ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗುತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.