ನೆಲ್ಯಾಡಿ: ಕಡಬ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಕೌಕ್ರಾಡಿ, ನೆಲ್ಯಾಡಿ ಹಾಗೂ ಗೋಳಿತ್ತೊಟ್ಟು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮವಾರು ಸಭೆ ಡಿ.27ರಂದು ಪೂರ್ವಾಹ್ನ 10.30ಕ್ಕೆ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಅಧಿಕಾರಿಗಳು ಭಾಗವಹಿಸಿ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಕೇಂದ್ರ ತೆರೆದು, ಫಲಾನುಭವಿಗಳಿಗೆ ಮಾಹಿತಿ ನೀಡಲಿದ್ದಾರೆ. ಫಲಾನುಭವಿಗಳು ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಉಷಾ ಅಂಚನ್ ನೆಲ್ಯಾಡಿ, ಗಂಗಾಧರ ಶೆಟ್ಟಿ ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.