ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

ಶೇರ್ ಮಾಡಿ

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ (92 ವರ್ಷ)ಗುರುವಾರ ರಾತ್ರಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ(ಡಿ.27) ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲೂ ಕಾಂಗ್ರೆಸ್‌ ನೇತೃತ್ವದ ಸರಕಾರವೂ ಏಳು ದಿನಗಳ ಶೋಕಾಚರಣೆ ಘೋಷಿಸಿದ್ದು, ಶುಕ್ರವಾರ (ಡಿ. 27) ಸರ್ಕಾರಿ ರಜೆ ಘೋಷಿಸಿದ್ದು, ಶಾಲೆ, ಕಾಲೇಜುಗಳು ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ.

ಕೇಂದ್ರ ಸರಕಾರ ನಾಳೆ ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳ ರದ್ದುಗೊಳಿಸಿ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿ ನಾಳೆ ಬೆಳಗ್ಗೆ 11 ಗಂಟೆಗೆ ತುರ್ತು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ ಡಾ. ಮನಮೋಹನ್ ಸಿಂಗ್ ಅವರಿಗೆ ಗೌರವ ನಮನಗಳ ಸಲ್ಲಿಸಲಿದೆ ಎಂದು ತಿಳಿಸಿದೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿ, ಮನಮೋಹನ್​ ಸಿಂಗ್ ಕೊಡುಗೆ ಮರೆಯಲು ಸಾಧ್ಯವಿಲ್ಲ. ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ. ವರಿಷ್ಠರ ಜೊತೆ ಚರ್ಚಿಸಿ ಮುಂದೆ ಕಾರ್ಯಕ್ರಮ ಮಾಡುತ್ತೇವೆ. ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ ಆಚರಿಸಲಾಗುತ್ತದೆ. 

  •  

Leave a Reply

error: Content is protected !!