ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಸಮೀಪದ ಅಡ್ಡಹೊಳೆ ಗ್ರಾಮದಲ್ಲಿ ಡಿ.27ರಂದು ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ ನಡೆಯಿತು.
ಅಖಿಲ ಭಾರತ ಸಂತ ಸಮಿತಿಯ ರಾಜ್ಯಾಧ್ಯಕ್ಷರಾದ ಮಹಾಮಂಡಲೇಶ್ವರ ಓಂ ಶ್ರೀ ವಿದ್ಯಾನಂದ ಸರಸ್ವತಿ ಮತ್ತು ಓಂ ಶ್ರೀ ಶಿವ ಜ್ಞಾನಮಯಿ ಸರಸ್ವತಿಯವರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಧರ್ಮಪ್ರಚಾರ ಸಮಿತಿಯ ರಾಜ್ಯ ಸಂಚಾಲಕ ಸೂರ್ಯನಾರಾಯಣ, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಕಡಬ ತಾಲೂಕು ಧರ್ಮ ಪ್ರಚಾರ ಪ್ರಮುಖ ಪ್ರಮೋದ್, ಅಧ್ಯಕ್ಷ ಗಣಪತಿ ಭಟ್ ಮತ್ತು ಊರಿನ ಗಣ್ಯರು ಪಾಲ್ಗೊಂಡಿದ್ದರು.