ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಯುವ ರಾಜಕಾರಣಿ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇದೀಗ ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಕುಟುಂಬದ ಜತೆ ವಿವಾಹ ಮಾತುಕತೆ ನಡೆಯುತ್ತಿದೆ ಎನ್ನಲಾಗುತ್ತಿದೆ.
ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ವರಿಸಲಿದ್ದಾರೆ. ರಾಮಮಂದಿರ ಉದ್ಘಾಟನೆ ವೇಳೆ ಪೂಜಿಸಲೆಂದೇ ಹೂಗಳ ತಂದೆ ಹಾಡಿನ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗೆ ಶಿವಶ್ರೀ ಸ್ಕಂದ ಪ್ರಸಾದ್ ಪಾತ್ರವಾಗಿದ್ದರು. ಸದ್ಯ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಕುಟುಂಬದ ನಡುವೆ ವಿವಾಹ ಮಾತುಕತೆ ನಡೆಯುತ್ತಿದೆ.
ಶಿವಶ್ರೀ ಸ್ಕಂದ ಪ್ರಸಾದ್ ಅವರು ಚೆನ್ನೈ ಮೂಲದವರು. ಗಾಯಕಿ ಮಾತ್ರವಲ್ಲದೆ ನುರಿತ ಭರತನಾಟ್ಯ ಕಲಾವಿದರೂ ಆಗಿದ್ದಾರೆ. ಅವರು ಶಾಸ್ತ್ರ ವಿಶ್ವವಿದ್ಯಾಲಯದಿಂದ ಜೈವಿಕ ಎಂಜಿನಿಯರಿಂಗನಲ್ಲಿ ಬಿ.ಟೆಕ್ ಪದವಿಯನ್ನು ಪಡೆದುಕೊಂಡಿದ್ದಾರೆ. ಚೆನ್ನೈ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಿಂದ ಸಂಸ್ಕೃತದಲ್ಲಿ ಎಂಎ ಪದವಿ ಪಡೆದುಕೊಂಡಿದ್ದಾರೆ.