ವಿದ್ಯುತ್ ಶಾರ್ಟ್‌ ಸರ್ಕೀಟ್‌, ಒಡವೆ, ಬಟ್ಟೆ ಭಸ್ಮ

ಶೇರ್ ಮಾಡಿ

ವಿದ್ಯುತ್ ಶಾರ್ಟ್‌ ಸರ್ಕೀಟ್‌ ಸಂಭವಿಸಿ ಮನೆಯೊಳಗಿದ್ದ ಪುಸ್ತಕ, ಬಟ್ಟೆ, ಆಭರಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ ರಾತ್ರಿ ಕಡಬ ತಾಲ್ಲೂಕಿನ ಆಲಂಕಾರಿನಲ್ಲಿ ನಡೆದಿದೆ.

ಅಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಎಂಬುವರ ಮನೆಗೆ ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಅಪಾರ ಹಾನಿ ಸಂಭವಿಸಿದೆ. ವಿನೋದಾ ಅವರ ಮಕ್ಕಳು ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಹೋಗಿದ್ದರು. ವಿನೋದಾ ಕೂಡ ಕೆಲಸ ಮುಗಿಸಿಕೊಂಡು, ಸಂಜೆ ಶಾಲಾ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆಗೆ ಹೋಗಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಮನೆಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಮನೆ ಬಳಿ ಹೋಗಿ ಪರಿಶೀಲಿಸಿದಾಗ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು. ಆದರೆ, ಅಷ್ಟರಲ್ಲಾಗಲೇ ಮನೆಯೊಳಗಿದ್ದ ಸೋಫಾ, ಬಟ್ಟೆ, ಆಭರಣ ಮತ್ತು ಮಕ್ಕಳ ಪುಸ್ತಕಗಳು ಬೆಂಕಿಗೆ ಆಹುತಿಯಾಗಿದ್ದವು.

ಸ್ಥಳಕ್ಕೆ ಆಲಂಕಾರು ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  •  

Leave a Reply

error: Content is protected !!