ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಪೂರ್ವಭಾವಿ ಸಭೆಯು ಜ.12 ರಂದು ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಆಡಳಿತ ಮುಕ್ತೇಸರ ಡಾ.ಸುಬ್ರಹ್ಮಣ್ಯ ಶಬರಾಯ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸತೀಶ್.ಕೆ.ಎಸ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ವಾರ್ಷಿಕೋತ್ಸವದ ತಯಾರಿ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಾಜೆ, ಕೋಶಾಧಿಕಾರಿ ವೆಂಕಟರಮಣ, ಸದಸ್ಯರಾದ ಶ್ರೀಪತಿ ಶಬರಾಯ, ಜಯರಾಮ ಶೆಟ್ಟಿ ಗೌರಿಜಾಲು, ಪ್ರಸಾದ್, ಭಜನಾ ಮಂಡಳಿ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಬಾಲಕೃಷ್ಣ, ಸೌಮಿತ್ರಶಬರಾಯ, ಪುರುಷೋತ್ತಮ, ತುಕಾರಾಮ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.