ಬೈಕೊಂದು ಸವಾರನ ನಿಯಂತ್ರಣ ತಪ್ಪಿದ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ದುರ್ಘಟನೆ ನಡೆದಿದೆ.
ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು ಈತ ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ.
ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.