
ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವದ ಆಚರಣೆಯು ನಡೆಯಿತು.

ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕುಮಾರ್ ಗೌಡ ನೆರವೇರಿಸಿದರು.ಮಾಜಿ ಅಧ್ಯಕ್ಷರಾದ ಎಂ.ಕೆ.ಇಬ್ರಾಹಿಂ, ಲೋಕೇಶ್ ಬಾಣಜಾಲು ಹಾಗೂ ಸದಸ್ಯರುಗಳಾದ ಹನೀಫ್, ರೋಯಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.






