ಕೊಕ್ಕಡ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣೆ ಶಿಬಿರ

ಶೇರ್ ಮಾಡಿ

ಕೊಕ್ಕಡ: ನಿರ್ದೇಶಕರು, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಇದರ ಸಹಯೋಗದೊಂದಿಗೆ ಕೊಕ್ಕಡ ಸಮುದಾಯ ಅರೋಗ್ಯ ಕೇಂದ್ರ ದಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ತಪಾಸಣೆ ಶಿಬಿರ ಜ.30ರಂದು ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ವೈದ್ಯಾಧಿಕಾರಿ ಡಾ.ಪ್ರಕಾಶ್ ಅವರು ಉದ್ಘಾಟಿಸಿದರು. ಆಡಳಿತ ವೈದ್ಯಾಧಿಕಾರಿ ಡಾ.ತುಷಾರ ಅವರು ಕಣ್ಣಿನ ಪೊರೆ ತಪಾಸಣೆ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಆಯುಷ್ ವೈದ್ಯಾಧಿಕಾರಿ ಡಾ.ಚೈತ್ರಾ ಅವರು ಉಪಸ್ಥಿತರಿದ್ದರು. ಒಟ್ಟು 59 ಫಲಾನುಭವಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಇದರಲ್ಲಿ 9 ಫಲಾನುಭವಿಗಳನ್ನು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಗುರುತಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಪರ್ಶ್ ಕುಷ್ಠ ರೋಗ ಜಾಗೃತಿ ಅಭಿಯಾನ 2025 ಇದರ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು. ನೇತ್ರಾಧಿಕಾರಿ ಶುಭವಿ ಸ್ವಾಗತಿಸಿದರು.

  •  

Leave a Reply

error: Content is protected !!