ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ರೋಬೋಟಿಕ್ಸ್ ಎಕ್ಸ್ ಪ್ರೊ 2025

ಶೇರ್ ಮಾಡಿ

ನೆಲ್ಯಾಡಿ: ಅಧ್ಯಾಪಕನಾದವನು ತನ್ನ ವಿದ್ಯಾರ್ಥಿ ತನಕ್ಕಿಂತ ಉತ್ತಮ ಸಾಧನೆಯನ್ನು ಮಾಡಬೇಕೆಂಬ ಉದ್ದೇಶದಿಂದ ಆತನನ್ನು ಶಾಲಾ ದಿನಗಳಲ್ಲಿ ಉತ್ತಮ ಮೂರ್ತಿಯನ್ನಾಗಿ ಕೆತ್ತಲು ಶ್ರಮಿಸುತ್ತಾರೆ. ಶಿಕ್ಷಣವೆಂಬುದು ಹರಿಯುತ್ತಿರುವ ಸಾಗರವಾಗಿದೆ ಅದನ್ನು ಕಷ್ಟಪಟ್ಟು ಈಜಿ ದಡ ಸೇರಬೇಕಾದದ್ದು ವಿದ್ಯಾರ್ಥಿಯಾದವನ ಕರ್ತವ್ಯವಾಗಿದೆ. ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯು ಅನೇಕ ಪ್ರತಿಭೆಗಳನ್ನು ಸಮಾಜಕ್ಕೆ ನೀಡಿದ ಕೀರ್ತಿ ಈ ವಿದ್ಯಾ ಸಂಸ್ಥೆಗೆ ಇದೆ. ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅನ್ನು ಈ ಸಂಸ್ಥೆಯಲ್ಲಿ ಅಳವಡಿಸಿ ವಿದ್ಯಾರ್ಥಿಗಳು ಇನ್ನಷ್ಟು ಸಮಾಜಕ್ಕೆ ಉಪಯುಕ್ತವಾಗಿ ಹೊರಹೊಮ್ಮುವಂತೆ ಮಾಡಲು ಸಾಧ್ಯವಾಗಿದೆ ಎಂದು ಉದನೆ ಬಿಷಪ್ ಪೋಲಿಕಾಪಸ್ ಪಬ್ಲಿಕ್ ಸ್ಕೂಲ್ ನ ಸಂಚಾಲಕರಾದ ರೆ.ಫಾ.ಹನಿ ಜೇಕಬ್ ಹೇಳಿದರು.

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜು ನಲ್ಲಿ ಜ.31ರಂದು ನಡೆದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ರೋಬೋಟಿಕ್ಸ್ ಎಕ್ಸ್-ಪ್ರೊ 2025 ಯನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ರೆ.ಫಾ.ಜೈಸನ್ ಸೈಮನ್ ಒಐಸಿ ವಹಿಸಿ ಮಾತನಾಡಿ ಇಂದಿನ ಯುಗದಲ್ಲಿ ಸೋಶಿಯಲ್ ಮೀಡಿಯಗಳ ಬಳಕೆ ಹಾಗೂ ಪ್ರಚಾರಗಳು ಹೆಚ್ಚಾಗುತ್ತಿದೆ. ಮುಂದಿನ ಜನಾಂಗದ ವಿದ್ಯಾರ್ಥಿಗಳಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಗಳಂತಹ ವಿಷಯಗಳು ಅತಿ ಅಗತ್ಯವಾಗಿದೆ ಎಂದರು.

ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉದಯಕುಮಾರ್. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಸನ್ನಿ ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಕಾಲೇಜಿನ ಪ್ರಾಚಾರ್ಯರಾದ ಡಾ.ವರ್ಗೀಸ್ ಕೈಪನಡ್ಕ ಒಐಸಿ, ಫಾ.ಜಿಜನ್, ಬೆಥನಿ ಐಟಿಐ ಪ್ರಾಚಾರ್ಯರಾದ ಸಜಿ ತೋಮಸ್, ಟಿಟ್ಟಿ, ಶಾಲಾ ಮುಖ್ಯಶಿಕ್ಷಕ ಜಾರ್ಜ್ ತೋಮಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲಿಕೆ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾಲೇಜಿನ ಉಪಪ್ರಾಚಾರ್ಯರಾದ ಜೋಸ್.ಎಮ್.ಜೆ ಸ್ವಾಗತಿಸಿದರು, ವಿದ್ಯಾರ್ಥಿನಿ ಸೋನಾ ಫ್ರಾನ್ಸಿಸ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯಶಿಕ್ಷಕ ಜಾರ್ಜ್ ತೋಮಸ್ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ತಯಾರಿಸಿದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ರೋಬೋಟಿಕ್ಸ್ ಎಕ್ಸ್-ಪ್ರೊ ಪ್ರದರ್ಶಿಸಲಾಯಿತು ವಿವಿಧ ಶಾಲಾ ವಿದ್ಯಾರ್ಥಿಗಳು ಆಗಮಿಸಿ ವೀಕ್ಷಿಸಿದರು ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

  •  

Leave a Reply

error: Content is protected !!