ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮಾಹಿತಿ ಜಾಗೃತಿ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಇದರ ಎನ್ಎಸ್ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಹಾಗೂ ಹದಿಹರೆಯದ ಸಮಸ್ಯೆಗಳು ಮತ್ತು ಮಾದಕ ದ್ರವ್ಯ ವ್ಯಸನ ಮುಕ್ತ ಜೀವನದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಬೆಳ್ತಂಗಡಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಮ್ಮಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಹದಿಹರೆಯದ ಸಂದರ್ಭದಲ್ಲಿ ನಡೆಯುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಅಧ್ಯಯನದೊಂದಿಗೆ ಇತರ ಉತ್ತಮ ಹವ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾನಸಿಕ ತುಮುಲ ಹಾಗೂ ಖಿನ್ನತೆಯನ್ನು ಜೈಸಬಹುದು ಎಂದು ನುಡಿದರು.

ಕಾಲೇಜಿನ ಪ್ರಾಚಾರ್ಯರಾದ ಏಲಿಯಾಸ್.ಎಂ.ಕೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ರೆ.ಫಾ.ಅನೀಶ್ ಪಾರಶೇರಿಲ್ ಮತ್ತು ಸಂಚಾಲಕರಾದ ರೆ.ಫಾ ನೋಮಿಸ್ ಕುರಿಯಕೋಸ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಘಟಕನಾಯಕ ಆಶ್ಲೇಷ್, ಘಟಕ ನಾಯಕಿ ದೀಕ್ಷಿತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ.ಶೆಟ್ಟಿ.ಕೆ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  •  

Leave a Reply

error: Content is protected !!