ಕಳಪ್ಪಾರು: ಭಜನಾ ತರಬೇತಿ ಸಮಾರೋಪ; ಆಹ್ವಾನಿತ ತಂಡಗಳಿಂದ ಕುಣಿತ ಭಜನೆ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಳಪ್ಪಾರು ಮತ್ತು ಪುತ್ತಿಗೆ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ತಂಡ ಕಳಪ್ಪಾರು ಮತ್ತು ಶ್ರೀ ಪರಶುರಾಮ ಭಜನಾ ತಂಡ ಉದನೆ ಪುತ್ತಿಗೆ ಇದರ ಭಜನಾ ತರಬೇತಿ ಕಾರ್ಯಕ್ರಮದ ಸಮರೋಪ ಹಾಗೂ ಆಹ್ವಾನಿತ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಫೆ.2ರಂದು ಕಳಪ್ಪಾರಿನ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಸ್ಥಾನದಲ್ಲಿ ನಡೆಯಿತು.

ಸಬಾ ಕಾರ್ಯಕ್ರಮವನ್ನು ಶಿರಾಡಿ ಗ್ರಾ.ಪಂ ಅಧ್ಯಕ್ಷರಾದ ಕಾರ್ತಿಕೆಯನ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೆಸರ ಬಾಲಕೃಷ್ಣ ಗೌಡ, ಗೌರವಾಧ್ಯಕ್ಷರಾಗಿ ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಡೊಂಬಯ್ಯ ಗೌಡ ಕುದ್ಕೊಳಿ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ವಸಂತ ಗೌಡ ಅವರು ಧಾರ್ಮಿಕ ಉಪನ್ಯಾಸವನ್ನು ನೀಡಿದರು.

ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪ್ರದಾನ ಅರ್ಚಕರಾದ ಪ್ರಶಾಂತ್ ಭಟ್ ಅವರು ಕುಣಿತ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಡಬ ತಾಲೂಕಿನ ಯೋಜನಾಧಿಕಾರಿಯಾದ ಮೇದಪ್ಪ ಗೌಡ.ಎನ್, ನೆಲ್ಯಾಡಿ ವಲಯದ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಜಯಾನಂದ ಬಂಟ್ರಿಯಾಲ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕಿನ ಅಧ್ಯಕ್ಷರಾದ ಸುಂದರ ಗೌಡ ಬಿಳಿನೆಲೆ, ಕುಶಾಲಪ್ಪ ಗೌಡ ಪಿ.ಎನ್, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸಂತೋಷ್, ಉದನೆ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಪರಾರಿ, ಕಳಪ್ಪಾರು ಶ್ರೀ ಸುಬ್ರಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ದಿವಾಕರ, ಪುತ್ತಿಗೆ ಒಕ್ಕೂಟದ ಅಧ್ಯಕ್ಷರಾದ ಲೋಕಯ್ಯ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 12 ಭಜನಾ ತಂಡಗಳು ಮತ್ತು ಸುಮಾರು 500 ಜನ ಭಕ್ತಾಭಿಮಾನಿಗಳು ಪಾಲ್ಗೊಂಡಿದ್ದರು. ನೆಲ್ಯಾಡಿ ವಲಯ ಮೇಲ್ವಿಚಾರಕರಾದ ಆನಂದ.ಡಿ.ಬಿ ಸ್ವಾಗತಿಸಿದರು, ರುಕ್ಮಿಣಿ ವರದಿ ವಾಚಿಸಿದರು. ಕಡಬ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಅವರು ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರಿಯಲತಾ ವಂದಿಸಿದರು. ಸೇವಾ ಪ್ರತಿನಿಧಿ ಸುಮಿತ್ರ ಸಹಕರಿಸಿದರು.

ಸಭಾ ಕಾರ್ಯಕ್ರಮದ ಬಳಿಕ ತರಬೇತಿ ಪಡೆದ ಭಜನಾ ತಂಡಗಳು ಮತ್ತು ಆಹ್ವಾನಿತ ಭಜನಾ ತಂಡಗಳಿಂದ ಭಜನೋತ್ಸವ ನಡೆಯಿತು.

  •  

Leave a Reply

error: Content is protected !!