Nursing Student ನೇಣು ಬಿಗಿದುಕೊಂಡು ಆತ್ಮಹತ್ಯೆ

ಶೇರ್ ಮಾಡಿ

ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಪ್ರತಿಷ್ಠಿತ ದಯಾನಂದ ಸಾಗರ್ ಕಾಲೇಜಿನಲ್ಲಿ ನಡೆದಿದೆ.

ಅನಾಮಿಕಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅನಾಮಿಕ ಕೇರಳ ಮೂಲದ ಕಣ್ಣೂರಿನ ವಿದ್ಯಾರ್ಥಿನಿ ಆಗಿದ್ದು, ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸ್ಟೆಲ್‌ನಲ್ಲಿ ಊಟಕ್ಕೆ ಬಾರದ ಹಿನ್ನೆಲೆಯಲ್ಲಿ ಸಹ ವಿದ್ಯಾರ್ಥಿನಿಯರು ರೂಮ್‌ ಬಳಿ ಹೋಗಿದ್ದಾರೆ. ಬಾಗಿಲು ತಟ್ಟಿದ್ದರೂ ತೆಗೆಯದೇ ಇದ್ದರಿಂದ ಕಿಟಕಿಯಿಂದ ನೋಡಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾರೋಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  •  

Leave a Reply

error: Content is protected !!