
ನೆಲ್ಯಾಡಿ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕರ್ಬಸಂಕದ ಬಳಿ ಕಡವೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ. ಘಟನೆಯಲ್ಲಿ ಕಡವೆಯ ಕಾಲು ಮುರಿತಕ್ಕೊಳಗಾದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಕಡವೆಯನ್ನು ಕಡಬ ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.







