ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಸಹಕಾರ ಭಾರತೀಯ ಎಲ್ಲಾ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

ಶೇರ್ ಮಾಡಿ

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಸಹಕಾರ ಭಾರತೀಯ ಎಲ್ಲಾ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದಿದ್ದು. ಅಧ್ಯಕ್ಷರಾಗಿ ಚೈತ್ರ ಎಂ. ಜಿ ಗೌಡ ಕುರಿಯಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರೇಮ.ಸಿ ಕೊರಂಟಾಜೆ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಕವಿತಾ.ಕೆ ಕಾರ್ಯನಿರ್ವಹಿಸಿದ್ದರು.

ಈ ಸಂಧರ್ಭದಲ್ಲಿ ಬಿಜೆಪಿ ಕಣಿಯೂರು ಶಕ್ತಿ ಕೇಂದ್ರ ಪ್ರಮುಖ್ ಯತೀಶ್ ಶೆಟ್ಟಿ ಪಣೆಕ್ಕರ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಾನಕಿ ನಾಯ್ಕ್, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಹರೀಶ್ ಗೌಡ ಅಲೆಕ್ಕಿ, ದಿನೇಶ್ ನಾಯ್ಕ ಮೈಪಾಜೆ, ಪ್ರಮುಖರಾದ ವೀರಪ್ಪ ಗೌಡ, ದಿನೇಶ್ ಗೌಡ ಅಲೆಕ್ಕಿ, ಚಂದ್ರಹಾಸ ಉಪಸ್ಥಿತರಿದ್ದರು.

  •  

Leave a Reply

error: Content is protected !!