ಬರಂಗಾಯ ಶಾಲೆಯಲ್ಲಿ ಕಲಿಕಾ ಹಬ್ಬ

ಶೇರ್ ಮಾಡಿ

ಕೊಕ್ಕಡ: ಬರೆಂಗಾಯ ಶಾಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಕಲಿಕಾ ಹಬ್ಬವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರುಕ್ಮಯ ಪೂಜಾರಿ ವಹಿಸಿದ್ದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜ್ಯೋತಿ ಶಿವರಂಜನ್ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಸಮನ್ವಯ ಅಧಿಕಾರಿ ಬಸವಲಿಂಗಪ್ಪ, ಬೆಳ್ತಂಗಡಿ ಶಿಕ್ಷಣ ಸಂಯೋಜಕರು ಪ್ರೌಢಶಾಲಾ ವಿಭಾಗದ ಚೇತನಾಕ್ಷಿ, ನಿಡ್ಲೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ ಭಾಗವಹಿಸಿದ್ದರು. ಅತಿಥಿಗಳಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಐರನ್ ಡೇಸ, ಬೆಳ್ತಂಗಡಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಾರ್ಯದರ್ಶಿ ಜ್ಯೋತಿ, ಕಳೆಂಜ ಶಾಲೆಯ ಮುಖ್ಯಶಿಕ್ಷಕ ಕೃಷ್ಣಪ್ಪ.ಟಿ, ದೊಂಪದ ಪಲ್ಕೆ ಶಾಲೆಯ ಮುಖ್ಯಶಿಕ್ಷಕ ಸುರೇಶ ಆಚಾರ್, ಗುರಿಪಳ್ಳ ಶಾಲೆಯ ಮಂಜುಳಾ ಜೆ.ಟಿ ಹಾಗೂ ಬರಂಗಾಯ ಶಾಲೆಯ ಮುಖ್ಯ ಶಿಕ್ಷಕ ಗೋಪಾಲ್ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಮೆರವಣಿಗೆಯ ಮುಖಾಂತರವಾಗಿ ಮಕ್ಕಳನ್ನು ಕರೆದುಕೊಂಡು ಬಂದು ಸ್ವಾಗತಿಸಲಾಯಿತು. ಪ್ರತಿಮಾ ಪ್ರಸ್ತಾವಿಕವಾಗಿ ಕಲಿಕಾ ಹಬ್ಬದ ಕುರಿತಾಗಿ ಮಾತನಾಡಿದರು. ಬಸವಲಿಂಗಪ್ಪ ಕ್ಷೇತ್ರ ಸಮನ್ವಯ ಅಧಿಕಾರಿಗಳು ಕಲಿಕಾ ಹಬ್ಬದ ಚಟುವಟಿಕೆಗಳ ಪ್ರಯೋಜನವನ್ನು ತಾವುಗಳು ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.

ಎಫ್.ಎಲ್.ಎನ್ ಮಕ್ಕಳ ಕಲಿಕಾ ಚಟುವಟಿಕೆಗಳಿಗೆ ಕೊಠಡಿಗಳಿಗೆ ತೆರಲಾಯಿತು. ಗಟ್ಟಿ ಓದು, ರಸಪ್ರಶ್ನೆ, ಕಥೆ ಹೇಳುವುದು, ನಿಧಿಶೋದನೆ ಜ್ಞಾಪಕ ಶಕ್ತಿ, ಮೋಜಿನ ಗಣಿತ, ಪೋಷಕರೊಂದಿಗೆ ಸಂವಾದ, ಕೈಬರಹ ಮತ್ತು ಕ್ಯಾಲಿಗ್ರಫಿ ಮುಂತಾದ ಚಟುವಟಿಕೆಗಳನ್ನು ಚಟುವಟಿಕೆಗಳ ಮೂಲಕ ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಟ್ಟರು.

ಸಮಾರೋಪ ಸಮಾರಂಭ ಎಸ್ಡಿಎಂಸಿ ಉಪಾಧ್ಯಕ್ಷೆ ಆಶಾಲತಾ ಅಧ್ಯಕ್ಷತೆಯಲ್ಲಿ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಪ್ರವೀಣ್ ಹೆಬ್ಬಾರ್, ಅವರು ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರಾದ ಚೇತನಾಕ್ಷಿ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ,ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ಪೂಜಾರಿ. ಮುಖ್ಯಶಿಕ್ಷಕ ಗೋಪಾಲ್ ಉಪಸ್ಥಿತರಿದ್ದರು.

  •  

Leave a Reply

error: Content is protected !!