ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಮಾರುಕಟ್ಟೆ ಮೇಳ

ಶೇರ್ ಮಾಡಿ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಮಾರುಕಟ್ಟೆ ಮೇಳವನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವುದು,ಲಾಭ ನಷ್ಟದ ಪರಿಕಲ್ಪನೆಯನ್ನು ಮೂಡಿಸುವುದು ಹಾಗೂ ಕೊಡು ಕೊಳ್ಳುವುಕೆಯ ಜ್ಞಾನವನ್ನು ತಿಳಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಯಿತು.

ಸೈಂಟ್ ಆಂಟನೀಸ್ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಶ್ರೀಧರ ಗೌಡ ಮೇಳವನ್ನು ಉದ್ಘಾಟಿಸಿದರು. ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ವಿಶಾಲಾಕ್ಷಿ ಪ್ರಥಮ ಖರೀದಿ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮೇಹಿ ಜಾರ್ಜ್ ಹಾಗೂ ಸದಸ್ಯರು, ಎಲ್ಲಾ ಸಿಬ್ಬಂದಿ ವರ್ಗ, ಪಾಲಕ-ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ವಸ್ತುಗಳನ್ನು ಖರೀದಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.

  •  

Leave a Reply

error: Content is protected !!