

ಧರ್ಮಸ್ಥಳ :ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಕಾರ್ಯಕಾರಿಣಿ ಸದಸ್ಯರಾದ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.






