ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾವಿಧಿ ಸ್ವೀಕಾರ

ಶೇರ್ ಮಾಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ದಿನದ ಪ್ರತಿಜ್ಞೆಯನ್ನು ಬೋಧಿಸಿ, ವಿಜ್ಞಾನ ಮತ್ತು ಗಣಿತ ನಮ್ಮ ಜೀವನದಲ್ಲಿ ಹೇಗೆ ಹಾಸುಹೊಕ್ಕಾಗಿದೆ ಎಂದು ಕಥೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕ ಸೀತಾರಾಮ ಗೌಡ.ಕೆ. ವಹಿಸಿದ್ದರು.

ಅರಸಿನಮಕ್ಕಿ ಗ್ರಾಮ ಪಂಚಾಯತಿನ ಸಿಬ್ಬಂದಿಗಳಾದ ವಿಂಧ್ಯಾ, ಉಮೇಶ್, ಮಮತಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿಜ್ಞಾನದ ವಿವಿಧ ಮಾದರಿಗಳನ್ನು ಉತ್ತಮವಾಗಿ ಪ್ರದರ್ಶಿದರು. ಶಿಕ್ಷಕಿಯರಾದ ದಿವ್ಯಶ್ರೀ, ವಿದ್ಯಾಲಕ್ಷ್ಮಿ, ಹೇಮಾವತಿ, ಸಂಧ್ಯಾ, ಸ್ವಾತಿಯವರು ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿ ಸಹಕರಿಸಿದರು.

  •  

Leave a Reply

error: Content is protected !!