ಮಾ.2ರಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ

ಶೇರ್ ಮಾಡಿ

ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದರು.

ಶುಕ್ರವಾರ ಸಂಜೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್‌ನ ಕೇಂದ್ರ ಕಚೇರಿ(ದಾರುಲ್ ಔಕಾಫ್)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಚಂದ್ರ ದರ್ಶನದ ಬಗ್ಗೆ ಲಭ್ಯವಾದ ಮಾಹಿತಿ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಶನಿವಾರದಿಂದ ತರಾವೀಹ್‌ ನಮಾಝ್ ಹಾಗೂ ರವಿವಾರ ಮೊದಲ ಉಪವಾಸ ಆಚರಿಸಲಾಗುವುದು ಎಂದು ಮಕ್ಸೂದ್ ಇಮ್ರಾನ್ ತಿಳಿಸಿದರು.

ಸಭೆಯಲ್ಲಿ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ, ಮೌಲಾನಾ ಏಜಾಝ್ ಅಹ್ಮದ್ ನದ್ವಿ, ಮೌಲಾನಾ ಅಬ್ದುಲ್ ಖಾದಿರ್ ವಾಜಿದ್, ಮೌಲಾನಾ ಸೈಯದ್ ಮನ್ಝೂರ್ ರಝಾ ಆಬಿದಿ ಹಾಗೂ ಮೌಲಾನಾ ಖಾರಿ ಝುಲ್ಫಿಖಾರ್ ರಝಾ ನೂರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  •  

Leave a Reply

error: Content is protected !!