

ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ಸಾಗುತ್ತಿದ್ದು, ಮಾ.5 ರಂದು ನಡೆದ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆಯುತ್ತಿದ್ದ ವೇಳೆ ಹಿಡಿಯಲ್ಪಟ್ಟಿದ್ದಾರೆ.

ಈ ಅಕ್ರಮವನ್ನು ದಲಿತ ಸೇನೆ ಕಾರ್ಯಕರ್ತರು ಪ್ರಶ್ನಿಸಿ, ಕಾಲೇಜು ಆಡಳಿತವನ್ನು ಎಚ್ಚರಿಸಿದರು. ನಂತರ, ಪ್ರಾಂಶುಪಾಲರು ಬ್ರಹ್ಮಪೂರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಪೊಲೀಸರು ಸಂಪೂರ್ಣಾ ಪಾಟೀಲ್ ಅವರನ್ನು ಬಂಧಿಸಿದ್ದಾರೆ.
ಈ ಘಟನೆ ರಾಜ್ಯದ ಶೈಕ್ಷಣಿಕ ವ್ಯವಸ್ಥೆಯ ಪ್ರಾಮಾಣಿಕತೆಯ ಬಗ್ಗೆ ಗಂಭೀರ ಚರ್ಚೆ ಹುಟ್ಟುಹಾಕಿದೆ.






