

ಉರಿಮಜಲು: ಹಾಡು ಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ.

ವಿಟ್ಲ–ಪುತ್ತೂರು ಮುಖ್ಯ ರಸ್ತೆಯ ಉರಿಮಜಲು, ದೇವಸ್ಯ ರಸ್ತೆ ತಿರುವು ಸಮೀಪ ಗಣೇಶ್ ಗೌಡ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಮನೆಯಲ್ಲಿಯೇ ಯಾರೂ ಇಲ್ಲದ ಸಮಯವನ್ನು ಬಳಸಿಕೊಂಡ ಕಳ್ಳರು, ಏಳೂವರೆ ಪವನ್ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿಟ್ಲ ಠಾಣಾಧಿಕಾರಿ ನಾಗರಾಜ್ ಹೆಚ್.ಇ ಮತ್ತು ಎಸ್‌ಐ ವಿದ್ಯಾರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತಿದ್ದಾರೆ. ಈ ಕಳವು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರು ಶೀಘ್ರವೇ ಅಪರಾಧಿಗಳನ್ನು ಪತ್ತೆ ಮಾಡಲಿದ್ದಾರೆ ಎಂಬ ನಿರೀಕ್ಷೆಯಿದೆ.





