ಮಾರ್ಚ್ 19ರಂದು ಕಡಬದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಶೇರ್ ಮಾಡಿ

ಕಡಬ ತಾಲೂಕು ಕಛೇರಿಯಲ್ಲಿ ಮಾರ್ಚ್ 19 ರಂದು ಬೆಳಿಗ್ಗೆ 11.00 ಗಂಟೆಯಿಂದ “ಲೋಕಾಯುಕ್ತ ಜನ ಸಂಪರ್ಕ ಸಭೆ” ಆಯೋಜಿಸಲಾಗಿದೆ. ಈ ಸಭೆಯಲ್ಲಿ ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದಾರೆ.

ಸಭೆಯ ಸಮಯದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಸಾರ್ವಜನಿಕರು ಈ ಅರ್ಜಿಗಳನ್ನು ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿ ಸಲ್ಲಿಸಬಹುದು. ಸರ್ಕಾರಿ ಕಚೇರಿಗಳಲ್ಲಿನ ವಿಳಂಬ ಹಾಗೂ ಇತರ ತೊಂದರೆಗಳ ಬಗ್ಗೆ ಸಾರ್ವಜನಿಕರು ತಮ್ಮ ದೂರುಗಳನ್ನು ನೀಡಲು ಇದು ಒಳ್ಳೆಯ ಅವಕಾಶವಾಗಿದೆ.

ಸಂಭಾವ್ಯ ದೂರುದಾರರು ಕೇವಲ ಈ ದಿನ ಮಾತ್ರವಲ್ಲದೆ, ಯಾವುದೇ ದಿನ ಕಛೇರಿ ವೇಳೆಯಲ್ಲಿ ದೂರು ಸಲ್ಲಿಸಬಹುದು. ಇದರೊಂದಿಗೆ, ದೂರವಾಣಿ ಮೂಲಕವೂ ಸಾರ್ವಜನಿಕರು ತಮ್ಮ ಅಹವಾಲುಗಳ ಬಗ್ಗೆ ಸಂಪರ್ಕಿಸಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ ಎಂದು ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ತಿಳಿಸಿದ್ದಾರೆ.

  •  

Leave a Reply

error: Content is protected !!