ಮಾ.15ರಂದು ನೇತ್ರಾವತಿ-ಸಂಗಮ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ

ಶೇರ್ ಮಾಡಿ

ಕೊಕ್ಕಡ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ ದಕ್ಷಿಣ ಕನ್ನಡ, ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಜಂಟಿ ಸಹಯೋಗದಲ್ಲಿ ಮಾ.15ರ ಶನಿವಾರ ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ ಆಯೋಜಿಸಲಾಗಿದೆ.

ಬೆಳಿಗ್ಗೆ 9:00 ಗಂಟೆಗೆ ನೋಂದಾವಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ನಂತರ ಸಂಜೀವಿನಿ ಸಂತೆಯ ಉದ್ಘಾಟನೆ, ಮಹಿಳಾ ದಿನಾಚರಣೆ, ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭದಲ್ಲಿ ಸಂಜೀವಿನಿ ಸಿಬ್ಬಂದಿ, ಪದಾಧಿಕಾರಿಗಳು ಮತ್ತು ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ.

ಮಧ್ಯಾಹ್ನದ ಬಳಿಕ ಸಂಜೀವಿನಿ ಸಿಬ್ಬಂದಿ, ಪದಾಧಿಕಾರಿಗಳು ಮತ್ತು ಸದಸ್ಯರಿಗೆ ವಿಶೇಷ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಮತ್ತು ಸಂಜೀವಿನಿ ಸದಸ್ಯರ ಕೈಗಾರಿಕಾ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜರುಗುತ್ತಿದೆ ಎಂದು ಕಾರ್ಯಕ್ರಮದ ಸಂಯೋಜಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

  •  

Leave a Reply

error: Content is protected !!