


ನೆಲ್ಯಾಡಿಯ ವಿ ವಿ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದಲ್ಲಿ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ ಮಾ.18ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೌನ್ಸಿಲರ್ ಹಾಗೂ ತರಬೇತುದಾರ್ತಿ ಮಂಜೂಷ, ಕಾಲೇಜಿನ ಸಂಯೋಜಕ ಡಾ.ಸುರೇಶ್ ಅವರ ಅನುಮತಿಯೊಂದಿಗೆ ವಿದ್ಯಾರ್ಥಿಗಳಿಗೆ ಉದ್ಯೋಗ ನೋಂದಣಿ ಪ್ರಕ್ರಿಯೆ, ಉದ್ಯೋಗ ಕಾರ್ಡ್ ಬಳಕೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ, ಸಂದರ್ಶನ ಎದುರಿಸುವ ತಂತ್ರಗಳ ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ವೃದ್ಧಿಸಲು ಮಾರ್ಗದರ್ಶನ ಮಾಡಿದರು.
ವೃತ್ತಿ ಮಾರ್ಗದರ್ಶನ ಹಾಗೂ ಆಪ್ತ ಸಮಾಲೋಚನೆ ಸಮಿತಿಯ ಸಂಚಾಲಕರಾದ ಡಾ. ಸೀತಾರಾಮ ಪಿ ಅವರು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಪಾವನ ರೈ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





