


ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನುಷ ಘಟನೆಯಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಲ್ಪೆ ನಿವಾಸಿಗಳಾದ ಲೀಲಾ ಮತ್ತು ಪಾರ್ವತಿ ಬಂಧಿತ ಆರೋಪಿಗಳು. ಇದಲ್ಲದೆ, ಪ್ರಕರಣದ ಕುರಿತು ಸರಿಯಾದ ಮಾಹಿತಿ ಸಂಗ್ರಹಿಸದ ಕಾರಣ ಬೀಟ್ ಹೆಡ್‍ಕಾನ್‍ಸ್ಟೇಬಲ್ ಸುರೇಶ್ ಹಾಗೂ ಪೊಲೀಸ್ ಕಾನ್‍ಸ್ಟೇಬಲ್ ನಾಗರಾಜ್ ಅವರನ್ನು ಎಸ್.ಪಿ. ಆದೇಶದಂತೆ ಅಮಾನತು ಮಾಡಲಾಗಿದೆ.
ಈ ಘಟನೆಯನ್ನು ರಾಜ್ಯ ಮಹಿಳಾ ಆಯೋಗ ತೀವ್ರವಾಗಿ ಖಂಡಿಸಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಸಮಗ್ರ ವರದಿಯನ್ನು ಶೀಘ್ರದಲ್ಲೇ ಆಯೋಗಕ್ಕೆ ಸಲ್ಲಿಸಲು ಸೂಚಿಸಲಾಗಿದೆ.




