

ಸುಳ್ಯ: ಮಾವಿನ ಮಿಡಿ ಕೊಯ್ಯಲು ಮರಕ್ಕೆ ಹತ್ತಿದ್ದ ವೇಳೆ ಮರದಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಬರಡ್ಕ ಮಿತ್ತೂರಿನ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ (52)ಅವರು ಚಿಕಿತ್ಸೆ ಫಲಿಸದೆ ಮಾ.26ರಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಜನಾರ್ದನ ಪೂಜಾರಿ ಅವರು ಮಾ.22ರಂದು ಕೆಲಸಕ್ಕೆ ಹೋಗಿದ್ದು, ಅಲ್ಲಿ ಮಾವಿನ ಮರವೇರಿ ಮಾವಿನ ಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಇವರು ಮರದಿಂದ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಅಲ್ಲಿ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.





