ಅಣ್ಣಪ್ಪಸ್ವಾಮಿ ಬೆಟ್ಟದ ಮುಂದೆ ಧರ್ಮಸ್ಥಳ ಗ್ರಾಮಸ್ಥರ ಸಮೂಹ ಪ್ರಾರ್ಥನೆ

ಶೇರ್ ಮಾಡಿ

ಧರ್ಮಸ್ಥಳ: ಧರ್ಮಸ್ಥಳದ ಮೇಲೆ ಸುಳ್ಳು ಆರೋಪಗಳ ವಿರುದ್ಧ ಕಠಿಣ ಕಾನೂನು ಕ್ರಮದ ಆಗ್ರಹದೊಂದಿಗೆ, ಮಾ.27ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ ಜರುಗಿತು. ಈ ಸಭೆಯಲ್ಲಿ ಸಾವಿರಾರು ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕ್ಷೇತ್ರದ ಬಗ್ಗೆ ಆಧಾರರಹಿತ ಆರೋಪಗಳು ಹರಿದಾಡುತ್ತಿದ್ದು, ಇದು ಗ್ರಾಮಸ್ಥರ ಆತ್ಮಗೌರವಕ್ಕೆ ತೀವ್ರ ಧಕ್ಕೆಯಾಗಿದೆಯೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ವಿಶೇಷವಾಗಿ, ಸೌಜನ್ಯ ಪ್ರಕರಣಕ್ಕೆ ಕ್ಷೇತ್ರದ ಯಾವುದೇ ಸಂಬಂಧವಿಲ್ಲದಿದ್ದರೂ, ಈ ವಿಷಯವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕ್ಷೇತ್ರದ ತೇಜೋವಧೆ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆಪತ್ತು ವ್ಯಕ್ತಪಡಿಸಿದರು.

ಗ್ರಾಮಸ್ಥರು, ಧರ್ಮಸ್ಥಳದ ಹಿತರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ಸುಳ್ಳು ಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು. ಧರ್ಮಸ್ಥಳ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಕೇಶವ ಬೆಳಾಲು, ಎಸ್.ಕೆ.ಡಿ.ಆರ್.ಡಿ.ಪಿ. ಸಿಇಒ ಅನಿಲ್ ಕುಮಾರ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ, ಕ್ಷೇತ್ರದ ವೀರಶೆಟ್ಟಿ, ದನಕೀರ್ತಿ ಆರಿಗ, ಶ್ರೀನಿವಾಸ್ ರಾವ್, ಪ್ರಭಾಕರ ಪೂಜಾರಿ, ಪ್ರೀತಂ ಡಿ, ಅಜಿತ್ ಜೈನ್, ಭವಾನಿ ಶಂಕರ್ ರಾವ್, ನೀಲಕಂಠ ಶೆಟ್ಟಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಯು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಗ್ರಾಮಸ್ಥರು ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿ, ಕ್ಷೇತ್ರದ ಗೌರವವನ್ನು ಉಳಿಸಿಕೊಳ್ಳಲು ಪ್ರತಿಜ್ಞೆ ತೆಗೆದುಕೊಂಡರು.

  •  

Leave a Reply

error: Content is protected !!